ದಾವಣಗೆರೆ : ಕರ್ನಾಟಕದಲ್ಲಿ ಮೆಡಿಕಲ್ ಸೀಟುಗಳ ಶುಲ್ಕವನ್ನು ಕಡಿತಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ದಾವಣಗೆರೆಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರಿ ಮೆಡಿಕಲ್ ಕಾಲೇಜುಗಳ ಸೀಟುಗಳು ಕಡಿಮೆ ಶುಲ್ಕವೇ ಇದೆ. ಖಾಸಗಿ ಕಾಲೇಜುಗಳಲ್ಲಿ ಮಾತ್ರ ಶುಲ್ಕ ಹೆಚ್ಚಾಗಿದೆ. ಶೇ.90 ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೂ ಮೆಡಿಕಲ್ ಸೀಟು ಸಿಗುತ್ತಿಲ್ಲ.ಇದರಿಂದ ಶುಲ್ಕ ಹೆಚ್ಚಾಗುತ್ತಿರುವ ಕಾರಣ ಅವರು ವಿದೇಶಗಳಲ್ಲಿ ವ್ಯಾಸಂಗ ಮಾಡಲು