ಬೆಂಗಳೂರು, ಸೆ 13 : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಇನ್ನೂ ಮೂರುದಿನ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು, ಕರಾವಳಿ, ಕೊಡಗು ಮತ್ತು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಜಲಾಶಯಗಳಿಗೆ ಒಳಹರಿವು ಸಹ ಹೆಚ್ಚಿದೆ. ಬೆಂಗಳೂರು ನಗರದಲ್ಲಿ ಮೋಡ