ಕಳೆದ ಎರಡು ವಾರದಿಂದ ವಿರಾಮ ನೀಡಿದ್ದ ಮಳೆರಾಯ ಮತ್ತೆ ರಾಜ್ಯಕ್ಕೆ ಎಂಟ್ರಿ ಕೊಡಲಿದ್ದಾನೆ. ಡಿಸೆಂಬರ್ 17ರವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ. ಸಾಧಾರಣ ಮಳೆಯಾದ್ರೂ ರೈತ ವರ್ಗಕ್ಕೆ ಹೊಡೆತ ನೀಡಲಿದೆ. ಚಳಿಗಾಲದಲ್ಲಿಯ ಆಕಾಲಿಕ ಮಳೆ ಬೆಳೆಯನ್ನು ಹಾಳು ಮಾಡುವ ಮೂಲಕ ಇಳುವರಿಯನ್ನು ಕುಂಠಿತಗೊಳಿಸುತ್ತದೆ.ಮುಂದಿನ 5 ದಿನಗಳಲ್ಲಿ ತಮಿಳುನಾಡು-ಪುದುಚೇರಿ-ಕಾರೈಕಲ್, ಕೇರಳ- ಮಾಹೆ, ಲಕ್ಷದ್ವೀಪ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮತ್ತು ಮುಂದಿನ 2 ದಿನಗಳಲ್ಲಿ ದಕ್ಷಿಣ ಆಂಧ್ರಪ್ರದೇಶದಲ್ಲಿ