ಬೆಂಗಳೂರು(ಅ.16) : ನೈರುತ್ಯ ಮುಂಗಾರು ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ತೀವ್ರವಾಗಿದ್ದು, ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಸಕ್ರಿಯವಾಗಿದೆ. ಹಾಗಾಗಿ ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಮಳೆ ಸಾಧ್ಯತೆ? ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು