ಬೆಂಗಳೂರು : ರಾಜ್ಯ ರಾಜಧಾನಿ ಸೇರಿದಂತೆ ರಾಜ್ಯದ ಅನೇಕ ಕಡೆ ಸೋಮವಾರದಿಂದ 3 ದಿನಗಳ ವರೆಗೆ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 27, 28 ಮತ್ತು 29 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಹಾಸನ ಮತ್ತು ಮೈಸೂರು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.ಸೋಮವಾರ ಕೊಡಗು, ಬೀದರ್, ಕಲಬುರಗಿ ಮತ್ತು ರಾಯಚೂರು