ವಿಶ್ವದ 15ಕ್ಕೂ ಹೆಚ್ಚು ದೇಶಗಳಲ್ಲಿ ಕಂಡು ಬಂದಿರುವ ಓಮೈಕ್ರಾನ್ ಹರಡುವಿಕೆ ವೇಗ ಹೆಚ್ಚು ಎಂದು ವರದಿಯಾಗುತ್ತಿದೆ. ಹಾಗಾಗಿ ಭಾರತ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ. ಮತ್ತೊಂದು ಕಡೆ ಜನರಿಗೆ ವ್ಯಾಕ್ಸಿನ್ ನೀಡುವ ಪ್ರಕ್ರಿಯೆಗೆ ಚುರುಕು ಮುಟ್ಟಿಸಿದೆ. ಓಮೈಕ್ರಾನ್ ರೂಪಾಂತರಿ ಹಿನ್ನೆಲೆ ಸಾರ್ವಜನಿಕ ಸ್ಥಳಗಳಲ್ಲಿ ತೆರಳುವ ಜನರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರಬೇಕು. ಪ್ರವೇಶ ದ್ವಾರದಲ್ಲಿಯೇ ಲಸಿಕೆ ಪಡೆದಿರುವ ಸರ್ಟಿಫಿಕೇಟ್ ತೋರಿಸಬೇಕೆಂದು ಬಿಬಿಎಂಪಿ ಅಧಿಕೃತ ಸುತ್ತೋಲೆ ಹೊರಡಿಸಿದೆ.ಮಾಲ್, ಥಿಯೇಟರ್, ಮಲ್ಟಿಪ್ಲೆಕ್ಸ್