ಮಂಗಳೂರು : ಕರಾವಳಿ ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ.ಹವಾಮಾನ ಇಲಾಖೆ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ ನೀಡಿದ್ದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜ್ಗಳಿಗೆ ನಾಳೆ ರಜೆ ಘೋಷಿಸಲಾಗಿದೆ.ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸರಾಸರಿ 80mlನಷ್ಟು ಮಳೆಯಾಗುತ್ತಿದೆ. ಕಳೆದ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು ಮುಂಜಾನೆಯಿಂದ ಸಂಜೆವರೆಗೂ ಮಳೆಯಾಗುತ್ತಿದೆ.ಜಿಲ್ಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು