ನವದೆಹಲಿ, ಆ. 31: ಬೆಂಗಳೂರು ಮಹಾನಗರಕ್ಕೆ ಕುಡಿಯುವ ನೀರನ್ನು ಪೂರೈಸುವ ಮಹತ್ವಾಕಾಂಕ್ಷೆಯ ಯೋಜನೆ ಮೇಕೆದಾಟು ಬಳಿ ಅಣೆಕಟ್ಟು ನಿರ್ಮಿಸುವ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಮಹತ್ವದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಲಿದೆ. ಸಭೆಯಲ್ಲಿ ಕರ್ನಾಟಕ ಮೇಕೆದಾಟು ಬಳಿ ಅಣೆಕಟ್ಟು ನಿರ್ಮಾಣದ ಬಗ್ಗೆ ಸಲ್ಲಿಸಿರುವ ವಿಸ್ತೃತ ಯೋಜನಾ ವರದಿ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಎಂದಿನಂತೆ ತಮಿಳುನಾಡು ಕರ್ನಾಟಕದ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಮತ್ತು ವಿಸ್ತೃತ ಯೋಜನಾ ವರದಿಯನ್ನು