ನವದೆಹಲಿ : ದಿಲ್ಲಿ ಹಾಗೂ ಸುತ್ತಲಿನ ರಾಜಧಾನಿ ವಲಯದಲ್ಲಿ ಏಕಾಏಕಿ ಕೋವಿಡ್ ಸಂಖ್ಯೆ ಏರಿಕೆ ಆಗತೊಡಗಿದೆ. ಇದು ದೇಶಕ್ಕೆ ಮುನ್ನೆಚ್ಚರಿಕೆಯಂತಿದೆ. ಸೋಂಕು ಏರಿಕೆಗೆ ಹೆಚ್ಚು ಸೋಂಕುಕಾರಕವಾಗಿರುವ ಇತ್ತೀಚಿನ ಕೋವಿಡ್ ತಳಿಯಾದ ‘ಎಕ್ಸ್ಇ’ ಕಾರಣವೆ ಅಥವಾ ಇನ್ನಾವುದೋ ಹೊಸ ಕೋವಿಡ್ ತಳಿ ಕಾರಣವೇ ಎಂಬುದರ ಪತ್ತೆಗೆ ಸರ್ಕಾರ ಮುಂದಾಗಿದೆ. ಈ ನಡುವೆ, ಬುಧವಾರ ದಿಲ್ಲಿ ವಿಕೋಪ ನಿರ್ವಹಣಾ ಪ್ರಾಧಿಕಾರ ಸಭೆ ನಡೆಸಲಿದೆ. ಸಭೆಯಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ಬಗ್ಗೆ ಚರ್ಚೆ