ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುವುದರೊಂದಿಗೆ ಬಜೆಟ್ ಅಧಿವೇಶನ ಆರಂಭವಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ತಮ್ಮ ನಾಲ್ಕನೇ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಕೋವಿಡ್ -19 ಸಾಂಕ್ರಾಮಿಕದ ಮೂರನೇ ಅಲೆ ಮಧ್ಯೆ ಈ ವರ್ಷದ ಬಜೆಟ್ ಮಹತ್ವದ್ದಾಗಿದೆ.ಫೆ.1ರಂದು ಬೆಳಗ್ಗೆ 11 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ 2022-23ನೇ ಸಾಲಿನ ಬಜೆಟ್ ಅಧಿವೇಶನ ಮಂಡನೆ ಮಾಡಲಿದ್ದಾರೆ.