ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಇಂದು ಕೇವಲ 71 ಮಂದಿಯಲ್ಲಿ ಕೋವಿಡ್ 19 ಇರುವುದು ದೃಢಪಟ್ಟಿದೆ. ಹಾಗೆಯೇ ಇಬ್ಬರು ಕೊರೊನಾದಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ. ಇಂದು 173 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.ಈ ಮೂಲಕ ಇದುವರೆಗೆ 39,02,813 ಮಂದಿ ಕೋವಿಡ್ 19 ನಿಂದ ಗುಣಮುಖರಾಗಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,891 ಇದೆ. ರಾಜ್ಯದಲ್ಲಿ ಇದುವರೆಗೆ 40039 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ.