ಚಿತ್ರದುರ್ಗ : ಮುರುಘಾ ಶ್ರೀಗಳ ಪೊಲೀಸ್ ಕಸ್ಟಡಿ ಭಾನುವಾರಕ್ಕೆ ಅಂತ್ಯವಾಗಿದ್ದು ಜಾಮೀನು ಸಿಗುತ್ತಾ? ಅಥವಾ ನ್ಯಾಯಾಂಗ ಬಂಧನಕ್ಕೆ ಒಳಗಾಗುತ್ತಾರಾ ಎನ್ನುವುದು ಇಂದು ನಿರ್ಧಾರವಾಗಲಿದೆ. ಲೈಂಗಿಕ ದೌರ್ಜನ್ಯ ಅಲ್ಲದೇ ಶ್ರೀಗಳ ಮೇಲೆ ಪೋಕ್ಸೋ ಕೇಸ್ ದಾಖಲಾಗಿದೆ. ಹೀಗಾಗಿ ಚಾರ್ಜ್ಶೀಟ್ ಸಲ್ಲಿಕೆಯಾಗುವವರೆಗೂ ಜಾಮೀನು ಸಿಗುವುದು ಅನುಮಾನ ಎನ್ನಲಾಗುತ್ತಿದೆ.ಕಳೆದ 3 ದಿನಗಳಿಂದ ಪೊಲೀಸ್ ಕಸ್ಟಡಿಯಲ್ಲಿದ್ದ ಶ್ರೀಗಳನ್ನು ಇಂದು ಬೆಳಗ್ಗೆ 11 ಗಂಟೆಗೆ ಜೆಎಂಎಫ್ಸಿ ಕೋರ್ಟ್ಗೆ ಹಾಜರುಪಡಿಸಲಾಗುತ್ತದೆ. ಕಸ್ಟಡಿಗೆ ಪಡೆದ ಮೂರು ದಿನದಲ್ಲಿ ಸ್ಥಳ