ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಹವಾಮಾನ ವೈಪರಿತ್ಯ ಹಿನ್ನೆಲೆ ಬೆಂಗಳೂರು ಸೇರಿದಂತೆ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರಿಯಲಿದೆ. ಬೆಂಗಳೂರಿಗೆ ಜಿಟಿ ಜಿಟಿ ಮಳೆ ತಪ್ಪಿದಲ್ಲ. ಇನ್ನುಳಿದಂತೆ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಮಳೆ ಸುರಿಯಲಿದೆ. ಕೆಲವು ಕಡೆ ಗುಡುಗು-ಸಿಡಿಲು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ 25 ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಇಂದು