ಪಂಜಾಬ್ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ನಾಳೆ ಪ್ರಕಟವಾಗಲಿದೆ.ಫಲಿತಾಂಶಕ್ಕೂ ಮುನ್ನವೇ ಗೆಲುವಿನ ನಿರೀಕ್ಷೆಯಲ್ಲಿರುವ ಜನ ನಾಯಕರು ಈಗಾಗಲೇ ಸಂಭ್ರಮಾಚರಣೆಗೆ ಸಿದ್ಧತೆಯಲ್ಲಿ ತೊಡಗಿದ್ದಾರೆ.ವಿವಿಧ ರಾಜಕೀಯ ಪಕ್ಷಗಳ ಮುಖಂಡರಿಂದ ಮೋತಿಚೂರು ಲಡ್ಡೂ ಹಾಗೂ ಇತರೆ ಸಿಹಿತಿಂಡಿಗಳಿಗೆ ದೊಡ್ಡ ಪ್ರಮಾಣದಲ್ಲಿ ಆರ್ಡರ್ಗಳು ಬರುತ್ತಿರುವುದರಿಂದ ನಗರದ ಕೆಲ ಸಿಹಿತಿಂಡಿ ಅಂಗಡಿಗಳ ಮಾಲೀಕರಿಗೆ ಲಾಟರಿ ಹೊಡೆದಂತಾಗಿದೆ. ಚುನಾವಣಾ ಫಲಿತಾಂಶಕ್ಕೂ ಮೊದಲು ತಮಗೆ ಈಗಾಗಲೇ ಅನೇಕ ಆರ್ಡರ್ಗಳು ಬಂದಿವೆ, ಇತ್ತ ಸೋಮವಾರ ಮುಕ್ತಾಯಗೊಂಡ ಪಂಚರಾಜ್ಯ ಚುನಾವಣೆಗಳ