ಹಾಸನ : ಶಿರಾಡಿ ಘಾಟ್ನಲ್ಲಿ ಮತ್ತೆ ಭೂಕುಸಿತವಾಗಿದ್ದು, ಭಾರೀ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿದೆ. ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪದ ರಸ್ತೆ ವಾರದ ಹಿಂದೆ ಸ್ವಲ್ಪ ಪ್ರಮಾಣದಲ್ಲಿ ಕುಸಿದಿತ್ತು. ಈ ಹಿನ್ನೆಲೆ ಲೋಕೋಪಯೋಗಿ ಸಚಿವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಸಚಿವರು ಭೇಟಿ ನೀಡಿದ ನಾಲ್ಕನೇ ದಿನಕ್ಕೆ ಮತ್ತೆ ಭೂಕುಸಿತ ಕಾಣಿಸಿಕೊಂಡಿದೆ.ಇಂದು ಮಧ್ಯಾಹ್ನದ ವೇಳೆಗೆ ಮತ್ತೆ ಭೂಕುಸಿತವಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹಾಕಿದ್ದಾರೆ.