ಬೆಂಗಳೂರು : ಓಮಿಕ್ರಾನ್ ವೈರಸ್ ಭೀತಿ ಜಗತ್ತನ್ನು ಹಿಂಡಿ ಹಿಪ್ಪೆ ಮಾಡಿದೆ. ಡೆಲ್ಟಾ ಅಬ್ಬರಕ್ಕೆ ಮರಣಮೃದಂಗ ಬಾರಿಸಬಾರದು ಎಂದು ಎಲ್ಲ ದೇಶಗಳು, ಎಲ್ಲ ರಾಜ್ಯಗಳು ಕಟ್ಟೆಚ್ಚರ ವಹಿಸುತ್ತಿದ್ದು, ಹತ್ತು ಹಲವು ರೀತಿಯಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುತ್ತಿವೆ. ಓಮಿಕ್ರಾನ್ ಕುರಿತು ರಾಜ್ಯದಲ್ಲಿಯೂ ಈಗಾಗಲೇ ಹಲವು ಮಾರ್ಗಸೂಚಿ ಜಾರಿಯಾಗಿವೆ. ಆದರೂ ಎರಡನೇ ಡೋಸ್ ಲಸಿಕೆ ಪಡೆಯಲು ಜನ ಹಿಂದೇಟು ಹಾಕಿದ್ದಾರೆ. ಹೀಗಾಗಿ ಎಲ್ಲರೂ ಲಸಿಕೆ ಪಡೆಯುವಂತೆ ಮಾಡಲು ಕಠಿಣ ನಿಯಮಗಳನ್ನು ಜಾರಿ