ತುಮಕೂರು, ಅ 01 : ಬೆಂಗಳೂರು-ತುಮಕೂರು ರೈಲು ಮಾರ್ಗದ ವಿದ್ಯುದೀಕರಣ ಕಾಮಗಾರಿ ಮುಕ್ತಾಯಗೊಂಡಿದೆ. ಈ ಮಾರ್ಗದಲ್ಲಿ ಮೆಮು ರೈಲುಗಳನ್ನು ಓಡಿಸಲು ಇಲಾಖೆ ಚಿಂತನೆ ನಡೆಸಿದ್ದು, ಇದರಿಂದ ಉಭಯ ನಗರಗಳ ನಡುವೆ ಸಂಚಾರ ನಡೆಸುವ ಜನರಿಗೆ ಸಹಾಯಕವಾಗಲಿದೆ. ಚಿಕ್ಕಬಣಾವರ-ಹುಬ್ಬಳ್ಳಿ ನಡುವಿನ ಮಾರ್ಗದ ವಿದ್ಯುದೀಕರಣ ಭಾಗವಾಗಿ ಬೆಂಗಳೂರು-ತುಮಕೂರು ನಡುವಿನ 69.47 ಕಿ. ಮೀ. ರೈಲು ಮಾರ್ಗವನ್ನು ವಿದ್ಯುದೀಕರಣ ಮಾಡಲಾಗಿದೆ. ಕಾಮಗಾರಿ ಪೂರ್ಣಗೊಂಡಿದ್ದು, ರೈಲುಗಳ ಪ್ರಾಯೋಗಿಕ ಸಂಚಾರ ನಡೆಯುತ್ತಿದೆ. ಕಾಮಗಾರಿ ಪೂರ್ಣಗೊಂಡ ಬಳಿಕ ಎಲೆಕ್ಟ್ರಿಕ್