ಹೊಸದಿಲ್ಲಿ : ದಿಲ್ಲಿಯಲ್ಲಿ ಕ್ಷೀಣಿಸುತ್ತಿರುವ ಗಾಳಿ ಗುಣಮಟ್ಟದ ಕಾರಣದಿಂದ ಜನರು ಮನೆಯ ಒಳಗೆ ಇದ್ದರೂ ಮಾಸ್ಕ್ ಧರಿಸುವಂತೆ ಆಗಿದೆ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ಶನಿವಾರ ಹೇಳಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಉಂಟಾಗುತ್ತಿರುವ ವಾಯು ಮಾಲಿನ್ಯ ಹೆಚ್ಚಳದ ಕುರಿತಾದ ಅರ್ಜಿ ವಿಚಾರಣೆ ವೇಳೆ ದಿಲ್ಲಿಯ ಖೇದಕರ ಸ್ಥಿತಿಯ ಬಗ್ಗೆ ಸಿಜೆಐ ಕಳವಳ ವ್ಯಕ್ತಪಡಿಸಿದ್ದಾರೆ. ನಗರದ ಗಾಳಿ ಗುಣಮಟ್ಟ ಸುಧಾರಿಸಲು ತುರ್ತು ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಬಗ್ಗೆ ಕೇಂದ್ರ ಸರ್ಕಾರವನ್ನು