ಬೆಂಗಳೂರು, ಸೆ 06 : ಬಂಗಾಳಕೊಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಸೆಪ್ಟೆಂಬರ್ 5 ಮತ್ತು 6ರಂದು ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.