ನವದೆಹಲಿ : ಒಮಿಕ್ರೋನ್ ರೂಪಾಂತರಿ ಕೊರೋನಾ ವೈರಸ್ನ ಗುಣಲಕ್ಷಣಗಳು, ಸೋಂಕಿನ ಲಕ್ಷಣಗಳ ಬಗ್ಗೆ ವಿಜ್ಞಾನಿಗಳು ಕುತೂಹಲ ಹೊಂದಿರುವ ಹೊತ್ತಿನಲ್ಲೇ, ಇದುವರೆಗೆ ಪತ್ತೆಯಾದ ಯಾವುದೇ ರೂಪಾಂತರಿ ಜೊತೆಗೂ ಒಮಿಕ್ರೋನ್ಗೆ ನಂಟಿಲ್ಲ. ಇದೊಂದು ಪ್ರತ್ಯೇಕ ಪ್ರಭೇದ. ಹೀಗಾಗಿ ಭಾರತದಲ್ಲೀಗ ಸಮಾನಾಂತರಾವಾಗಿ ಎರಡು ಕೋವಿಡ್ ಅಲೆ ಕಾಣಿಸಿಕೊಂಡಿದೆ ಎಂದು ಹಿರಿಯ ವೈದ್ಯರೊಬ್ಬರು ಅಚ್ಚರಿ ಹೇಳಿಕೆ ನೀಡಿದ್ದಾರೆ.ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾಜಿ ಮುಖ್ಯಸ್ಥ, ಹಿರಿಯ ವೈರಾಣು ತಜ್ಞ ಡಾ. ಟಿ.ಜಾಕೋಬ್ ಜಾನ್