ಬೆಂಗಳೂರು : 2022-23ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ಗಳಿಗೆ ಇಡೀ ರಾಜ್ಯಕ್ಕೆ ಅನ್ವಯಿಸುವ ಹಾಗೆ ಏಕರೂಪದ ವೇಳಾಪಟ್ಟಿಯನ್ನು ಇದೇ ಮೊದಲ ಬಾರಿಗೆ ಸಿದ್ಧಪಡಿಸಲಾಗಿದೆ. ರಾಜ್ಯದ ಎಲ್ಲಾ ವಿ.ವಿ.ಗಳು ಮತ್ತು ಕಾಲೇಜುಗಳು ಇದನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.ಈ ಏಕರೂಪದ ಕಾರ್ಯಕ್ರಮ ಪಟ್ಟಿಯಂತೆ, ರಾಜ್ಯದ ಉದ್ದಗಲಕ್ಕೂ ಪದವಿ ತರಗತಿಗಳಿಗೆ ಜುಲೈ 11ರಿಂದ ಪ್ರವೇಶಾತಿ ಆರಂಭವಾಗಲಿದ್ದು, ಆಗಸ್ಟ್ 17ರಿಂದ 22ರ ನಡುವೆ