ಬೆಂಗಳೂರು : ಇನ್ಮುಂದೆ ರಾಜ್ಯದಲ್ಲಿ ನಡೆಯುವ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಎಲ್ಲ ಕಾರ್ಯಕ್ರಮಗಳಲ್ಲೂ ಕನ್ನಡ ಕಡ್ಡಾಯ ಬಳಕೆಗೆ ಸೂಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಕೇಂದ್ರ ಸರ್ಕಾರ ಪ್ರಾಯೋಜಕತ್ವದ ಕಾರ್ಯಕ್ರಮಗಳಲ್ಲಿ ಕನ್ನಡ ಮಾಯವಾಗುತ್ತಿದೆ ಎನ್ನುವ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸುವಂತೆ ಸರ್ಕಾರದಿಂದ ಇಂದು ಸುತ್ತೋಲೆ ಪ್ರಕಟಿಸಿದೆ.ಕನ್ನಡವನ್ನು ಕರ್ನಾಟಕ ರಾಜ್ಯದ ಆಡಳಿತ ಭಾಷೆಯಾಗಿ ಇರತಕ್ಕದ್ದೆಂದು ಕರ್ನಾಟಕ ರಾಜ್ಯ ಭಾಷಾ ಅಧಿನಿಯಮ-