ಬೆಂಗಳೂರು : ಕರ್ನಾಟಕದಲ್ಲಿ 15ರಿಂದ 18 ವರ್ಷ ವಯೋಮಿತಿಯ ಸುಮಾರು 31.75 ಲಕ್ಷ ಮಕ್ಕಳಿದ್ದು, ಕೊರೊನಾ ಲಸಿಕೆ ಪಡೆಯಲು ಇವರೆಲ್ಲರೂ ಅರ್ಹತೆ ಪಡೆದಿದ್ದಾರೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು ಮೂಡಲಪಾಳ್ಯದ ಬಿಬಿಎಂಪಿ ಶಾಲೆಯಲ್ಲಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.ಈ ವಯೋಮಿತಿಯ ಮಕ್ಕಳಿಗೆ ಲಸಿಕೆ ನೀಡಲಾಗುವುದು. ಮೊದಲ ಡೋಸ್ ಲಸಿಕೆ ಪಡೆದ 28 ದಿನಗಳ ನಂತರ ಇವರಿಗೆ 2ನೇ ಡೋಸ್ ಲಸಿಕೆ ಪಡೆಯಲು ಅರ್ಹತೆ ಬರಲಿದೆ.ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿಯೂ ಜಿಲ್ಲಾ ಉಸ್ತುವಾರಿ ಸಚಿವರು