5 ವರ್ಷ ಮೇಲ್ಪಟ್ಟ ಎಲ್ಲಾ ಮಕ್ಕಳು ಲಸಿಕೆಯನ್ನು ಪಡೆಯಲು ಅರ್ಹರು ಎಂದು ಹೇಳುವ ಮೂಲಕ, ಮಕ್ಕಳಿಗೂ ಕೊರೊನಾ ಲಸಿಕೆಯನ್ನು ಕಡ್ಡಾಯಗೊಳಿಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಈಕ್ವೆಡಾರ್ ಪಾತ್ರವಾಗಿದೆ. ಅಮೆರಿಕದಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್ ಹಾವಳಿ ಹೆಚ್ಚುತ್ತಿದ್ದಂತೆ ಈಕ್ವೆಡಾರ್ ದೇಶ ಮಕ್ಕಳಿಗೂ ಲಸಿಕೆಯನ್ನು ಕಡ್ಡಾಯಗೊಳಿಸಿದೆ. ಗುರುವಾರ ದೇಶದಲ್ಲಿ 5 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕೋವಿಡ್ ಲಸಿಕೆಯನ್ನು ಕಡ್ಡಾಯಗೊಳಿಸಿರುವುದಾಗಿ ಆರೋಗ್ಯ ಸಚಿವಾಲಯ ತಿಳಿಸಿದೆ.ಈಕ್ವೆಡಾರ್ನ 1.7 ಕೋಟಿ ಜನಸಂಖ್ಯೆಯಲ್ಲಿ ಸುಮಾರು 69%