ಬೆಂಗಳೂರು, ಸೆ 22 : ಇತರೆ ಆರೋಗ್ಯ ಸಮಸ್ಯೆಗಳನ್ನು ಹೊಂದಿರುವ ಮಕ್ಕಳಿಗೆ ಆದ್ಯತೆಯಲ್ಲಿ ಕೊರೊನಾ ಲಸಿಕೆಗಳನ್ನು ನೀಡಲಾಗುವುದು ಎಂದು ರಾಜ್ಯ ಆರೋಗ್ಯ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ. ಆರೋಗ್ಯ ನಂದನ ಕಾರ್ಯಕ್ರಮದ ಅಡಿಯಲ್ಲಿ ಸೆಪ್ಟೆಂಬರ್ 15ರವರೆಗೂ ರಾಜ್ಯದಲ್ಲಿ 53,82,106 ಮಕ್ಕಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಅದರಲ್ಲಿ 7259 ಮಕ್ಕಳಿಗೆ ಗಂಭೀರವಾದ ಅಪೌಷ್ಟಿಕತೆ ಸಮಸ್ಯೆ ಕಾಣಿಸಿಕೊಂಡಿದೆ ಎಂದು ವಿವರಣೆ ನೀಡಿದ್ದಾರೆ. ಸುಮಾರು 1,05,150 ಮಕ್ಕಳು ತೀವ್ರ ಅಪೌಷ್ಟಿಕತೆ, 1759 ಮಕ್ಕಳಿಗೆ ಮಧುಮೇಹ, 150