ನವದೆಹಲಿ : ಅಶಕ್ತರು ಮತ್ತು ಅಂಗವಿಕಲರಿಗಾಗಿ ಮನೆ ಮನೆಗೆ ತೆರಳಿ ಕೋವಿಡ್ ಲಸಿಕೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ತಿಳಿಸಿದೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿರುವ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ಪೀಠ, ಅಂಗವಿಕಲರಿಗೆ ಲಸಿಕೆ ನೀಡಲು ಈವರೆಗೆ ಕೇಂದ್ರ ಕೈಗೊಂಡಿರುವ ಕ್ರಮಗಳು ಮತ್ತು ಹೊಸ ಕ್ರಮಗಳಿಗಾಗಿ ಪ್ರಸ್ತಾವನೆ ಸಲ್ಲಿಸಿರುವ ಕುರಿತು ಮಾಹಿತಿ ನೀಡುವಂತೆ ಸಾಲಿಸಿಟರ್