ಬೆಂಗಳೂರು : ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕವಾಗಿದ್ದಾರೆ.ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಹಾಲಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮೇ 31 ರಂದು ನಿವೃತ್ತ ಆದ ಬಳಿಕ ತೆರವಾಗುವ ಸ್ಥಾನಕ್ಕೆ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ.ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆಯಾಗಿದ್ದಾರೆ.ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಈ ಹಿಂದೆ 2000 ನೇ ಇಸವಿಯಲ್ಲಿ