ಬೆಂಗಳೂರು(ಸೆ.08) : ದೇಶದಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ಮುಂಗಾರು ಹೆಚ್ಚಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಇಂದೂ ಕೂಡ ಭಾರೀ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ವ್ಯಾಪಕವಾಗಿ ಮಳೆಯಾಗುತ್ತಿದ್ದು ಇನ್ನು 4 ದಿನಗಳ ಕಾಲ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.