ಹುಬ್ಬಳ್ಳಿ : ಅಕಾಲಿಕವಾಗಿ ಸುರಿದ ಭಾರಿ ಮಳೆ ಸೃಷ್ಟಿಸಿದ ಅವಾಂತರಗಳಿಗೆ ಲೆಕ್ಕವಿಲ್ಲ. ಮಳೆಯಿಂದಾಗಿ ಒಂದು ಕಡೆ ರೈತ ಸಮುದಾಯ ಸಂಕಷ್ಟಕ್ಕೆ ಗುರಿಯಾಗಿದೆ. ಧಾರವಾಡ ಜಿಲ್ಲೆಯಲ್ಲಿ ಸುಮಾರು ಒಂದು ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಕೈಗೆ ಬಂದ ತುತ್ತು ರೈತರ ಬಾಯಿಗೆ ಬಾರದಂತಾಗಿದೆ. ಇದು ಹೀಗಿರಬೇಕಾದರೆ ಅತಿಯಾದ ಮಳೆ ಹೊಡೆತಕ್ಕೆ ಜನಸಾಮಾನ್ಯನೂ ಕಕ್ಕಾಬಿಕ್ಕಿಯಾಗುವಂತಾಗಿದೆ. ತರಕಾರಿಗಳ ದರ ದಿಢೀರ್ ಏರಿಕೆಯಾಗಿದ್ದು, ಗ್ರಾಹಕನ ಜೇಬಿಗೆ ಕತ್ತರಿ ಬೀಳುವಂತಾಗಿದೆ. ಅತಿವೃಷ್ಟಿಯಿಂದ ತರಕಾರಿ ಬೆಲೆ ಗಗನಕ್ಕೇರಿದೆ.