ದಿಸ್ಪುರ್ : ಪ್ರವಾಸಿ ವೀಸಾ ನಿಯಮ ಉಲ್ಲಂಘಿಸಿ, ಅನುಮತಿ ಪಡೆಯದೇ ಧಾರ್ಮಿಕ ಬೋಧನೆ ನಡೆಸುತ್ತಿದ್ದ ಆರೋಪದ ಮೇಲೆ 17 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಅಸ್ಸಾಂನ ಬಿಸ್ವನಾಥ್ ಚರಿಯಾಲಿ ಜಿಲ್ಲೆಯಲ್ಲಿ ಬಂಧಿಸಲಾಗಿದೆ.ಬಿಸ್ವನಾಥ್ ಜಿಲ್ಲೆಯ ಗಿಂಗಿಯಾ ಪ್ರದೇಶದ ದೂರದ ಬಾಗ್ಮರಿ ಪ್ರದೇಶದಲ್ಲಿ ಅವರನ್ನು ಬಂಧಿಸಲಾಗಿದೆ. ಅಸ್ಸಾಂಗೆ ಬರುವ ಮೊದಲು ಅವರು ರಾಜಸ್ಥಾನದ ಅಜ್ಮೀರ್ ಷರೀಫ್ ಮತ್ತು ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯ ಸ್ಥಳಗಳಿಗೆ ಭೇಟಿ ನೀಡಿದ್ದರು ಎಂದು ಡಿಜಿಪಿ ಭಾಸ್ಕರ್ ಜ್ಯೋತಿ ಮಹಾಂತ