ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಕೇವಲ 25 ಕ್ಷೇತ್ರಗಳಲ್ಲಿ ಮಾತ್ರ ಜಯಗಳಿಸಬಹುದು ಎನ್ನುವ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಮೊದ್ಲು ಕಾಂಗ್ರೆಸ್ 25 ಸೀಟುಗಳಲ್ಲಿ ಜಯಗಳಿಸುತ್ತದೆಯೋ ಕಾದು ನೋಡಿ ಎಂದು ತಿರುಗೇಟು ನೀಡಿದ್ದಾರೆ. ಹಾಸನದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿ ಸಿದ್ದರಾಮಯ್ಯ ಸ್ಥಿತಿಯೇ ಹೀನಾಯವಾಗಿದೆ. ಮೈಸೂರಿನಲ್ಲೆ 5 ದಿನಗಳಿಂದ ಟಿಕಾಣಿ ಹೂಡುವ ಪರಿಸ್ಥಿತಿ ಬಂದಿದೆ ಎಂದು ಲೇವಡಿ ಮಾಡಿದರು.