ಬೆಂಗಳೂರು : ನೈಟ್ ಕರ್ಫ್ಯೂ ವೇಳೆ ಸರ್ಕಾರದ ಗೈಡ್ಲೈನ್ಗಳನ್ನು ಕಡ್ಡಾಯವಾಗಿ ಎಲ್ಲರೂ ಪಾಲನೆ ಮಾಡಬೇಕು. ಇಲ್ಲವಾದರೆ ಅವರ ಮೇಲೆ ದೂರು ದಾಖಲಿಸಲಾಗುವುದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ತಡೆಗಟ್ಟುವ ಹಿನ್ನೆಲೆಯಲ್ಲಿ ಹತ್ತು ಗಂಟೆಯಿಂದ ಐದು ಗಂಟೆ ತನಕ ನೈಟ್ ಕರ್ಫ್ಯೂ ಜಾರಿಯಾಗಿದ್ದು, ಆ ಸಮಯದಲ್ಲಿ ಅನಾವಶ್ಯಕವಾಗಿ ಯಾರು ಹೊರಗಡೆ ಬರುವಂತಿಲ್ಲ.ಜೊತೆಗೆ ಯಾರಿಗೂ ಯಾವುದೇ ಪಾಸ್ ನೀಡಲಾಗುವುದಿಲ್ಲ. ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶ