ಹೊಸದಿಲ್ಲಿ : ಕೊರೊನಾ ವೈರಸ್ ಸೋಂಕಿನ ಹೊಸ ತಳಿ ಬಹು ರೂಪಾಂತರ ಹೊಂದುವ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ ಮೂರು ದೇಶಗಳಿಂದ ಬರುವ ಪ್ರಯಾಣಿಕರನ್ನು ಕಟ್ಟುನಿಟ್ಟಿನ ತಪಾಸಣೆ ಹಾಗೂ ಪರೀಕ್ಷೆಗೆ ಒಳಪಡಿಸುವಂತೆ ಗುರುವಾರ ಆದೇಶಿಸಿದೆ. ದಕ್ಷಿಣ ಆಫ್ರಿಕಾ, ಹಾಂಕಾಂಗ್ ಮತ್ತು ಬೋಟ್ಸ್ವಾನಾ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇರಿಸಲು ಸೂಚಿಸಲಾಗಿದೆ. ಕೋವಿಡ್ 19 ಪಾಸಿಟಿವ್ ಕಂಡುಬಂದ ಪ್ರಯಾಣಿಕರ ಮಾದರಿಗಳನ್ನು ಸೂಚಿತ ಜೆನೋಮ್ ಸೀಕ್ವೆನ್ಸಿಂಗ್ ಲ್ಯಾಬೋರೇಟರಿಗಳಿಗೆ