ಲಂಡನ್ : ಕೋವಿಡ್ ಸೋಂಕಿಗೆ ತುತ್ತಾದ ಬಳಿಕದ 6 ತಿಂಗಳವರೆಗೆ ರೋಗಿಗಳು ರಕ್ತ ಹೆಪ್ಪುಗಟ್ಟುವಂತಹ ಸಮಸ್ಯೆಗಳಿಗೆ ಒಳಗಾಗುವ ಅಪಾಯದ ಸಾಧ್ಯತೆ ಹೆಚ್ಚು ಎಂದು ಅಧ್ಯಯನವೊಂದು ತಿಳಿಸಿದೆ. ಕೋವಿಡ್ನ ಮಧ್ಯಮ ಪ್ರಮಾಣದ ರೋಗ ಲಕ್ಷಣಗಳನ್ನು ಹೊಂದಿದ್ದವರಿಗೂ ಈ ಸಮಸ್ಯೆ ಬಾಧಿಸುವ ಸಾಧ್ಯತೆ ಇರುತ್ತದೆ ಎಂದು ವರದಿ ಹೇಳಿದೆ. ಕೋವಿಡ್ನಿಂದ ಚೇತರಿಸಿಕೊಂಡವರಿಗೆ ಮುಂದಿನ 3 ತಿಂಗಳುಗಳಲ್ಲಿ ರಕ್ತನಾಳಗಳಲ್ಲಿ, ಕಾಲುಗಳಲ್ಲಿ ರಕ್ತ ಹೆಪ್ಪುಗಟ್ಟುವ ಸಮಸ್ಯೆ ಕಾಣಿಸಿಕೊಳ್ಳಬಹುದು.ಶ್ವಾಸಕೋಶದಲ್ಲಿ ಮುಂದಿನ 6 ತಿಂಗಳಲ್ಲಿ ರಕ್ತ ಹೆಪ್ಪುಗಟ್ಟುವ