ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲಾದರೂ ಮಾಡಲಿ. ಆದರೆ ಕೋವಿಡ್-19 ನಿಯಮ ಪಾಲಿಸಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಹೊಸ ವರ್ಷಕ್ಕೆ ಇನ್ನೇನು ಕೌಂಟ್ಡೌನ್ ಸ್ಟಾರ್ಟ್ ಆಗಿದೆ. ಈ ನಡುವೆ ಜನ ಹೊಸ ವರ್ಷಾಚರಣೆಗೆ ಗುಂಪುಗೂಡಿ ಮತ್ತೆ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಸರ್ಕಾರ ಡಿಸೆಂಬರ್ 28 ರಿಂದ ನೈಟ್ ಕರ್ಫ್ಯೂ ಘೋಷಿಸಿದೆ.ಕೊರೊನಾ