ರುದ್ರನ ಆರಾಧಕರಿಗೆ ಇಂದು ಸಂಭ್ರಮದ ದಿನ. ದೇಶಾದ್ಯಂತ ಆಚರಿಸುವ ಅತೀ ದೊಡ್ಡ ಹಬ್ಬಗಳಲ್ಲಿ ಮಹಾಶಿವರಾತ್ರಿ ಸಹ ಒಂದು.ಶಿಶಿರ ಋತುವಿನ ಮಾಘ ಮಾಸದ ಕೃಷ್ಣ ಪಕ್ಷ ಬಹುಳ ಚತುರ್ದಶಿಯಂದು ಬರುವ ಶಿವರಾತ್ರಿಯ ದಿನ ಭಕ್ತಾದಿಗಳು ಶಂಕರನನ್ನು ನೆನೆದು, ಪುನೀತರಾಗುತ್ತಾರೆ.ಭಕ್ತರ ಇಷ್ಟಾರ್ಥಗಳಿಗೆ ಎಂದಿಗೂ ನಿರಾಸೆ ಮಾಡದ ಶಿಷ್ಟ ರಕ್ಷಕನಾದ ಶಿವ, ಭಕ್ತರು ಕೇಳಿದ ವರಗಳನ್ನು ಕೊಡುತ್ತಾನೆ ಎಂಬ ನಂಬಿಕೆ ಇದೆ. ಶಿವರಾತ್ರಿಯಂದು ದೇಶಾದ್ಯಂತ ವಿಶೇಷ ಪೂಜೆಗಳು ನೆರವೇರುತ್ತವೆ. ಇಡೀ ಭಾರತದಾದ್ಯಂತ ಬಹುತೇಕ ಎಲ್ಲ