ಈ ಮಾಸದಲ್ಲಿ ಮುಸ್ಲಿಮರು 30 ದಿನ ಉಪವಾಸ ಆಚರಿಸುವ ಜೊತೆಗೆ ದಾನ-ಧರ್ಮ, ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುತ್ತಾರೆ.ಇಸ್ಲಾಮಿನ ತರಾವೀಹ್, ನಮಾಜ್, ಉಪವಾಸ, ಝಕಾತ್ (ದಾನ), ಹಜ್ ಎಂಬ ಪಂಚಕರ್ಮಗಳನ್ನು ನೇರವೇರಿಸುವ ರಂಜಾನ್ ಪುಣ್ಯ ಸಂಪಾದಿಸುವ ಮಾಸವೂ ಎನಿಸಿಕೊಂಡಿದೆ.ಈ ಸಮಯದಲ್ಲಿ ಆತ್ಮನಿಯಂತ್ರಣದ ಜತೆಗೆ ಸಂಯಮ ರೂಢಿಸಿಕೊಳ್ಳುವುದನ್ನು ಕಲಿಯುತ್ತಾರೆ. ಬಡವರ ಹಸಿವು ಅರಿಯುವ ಜೊತೆಗೆ ಒಂದು ಹೊತ್ತಿನ ಊಟಕ್ಕೆ ಕಷ್ಟಪಡುವವರ ಜೀವನ ಹೇಗಿರಬಹುದು? ಎಂಬ ಪಾಠವನ್ನೂ ಉಪವಾಸ ಕಲಿಸುತ್ತದೆ.ಅಲ್ಲದೆ ರಾತ್ರಿ ವೇಳೆ ನಡೆಯುವ ವಿಶೇಷ