ನವದೆಹಲಿ: ಕೋವಿಡ್ಗೆ ಬಲಿಯಾದ ವ್ಯಕ್ತಿಗಳ ಕುಟುಂಬ ಸದಸ್ಯರಿಗೆ ಕೃಪಾನುದಾನ ನೀಡುವ ಸಂಬಂಧ ಮಾರ್ಗಸೂಚಿ ರೂಪಿಸುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ (ಎನ್ಡಿಎಂಎ) ಸುಪ್ರೀಂಕೋರ್ಟ್ ಬುಧವಾರ ಆದೇಶಿಸಿದೆ. ಕೃಪಾನುದಾನದ ಮೊತ್ತ ಎಷ್ಟು ಇರಬೇಕು ಎಂದು ನಿರ್ಧರಿಸುವುದು ಎನ್ಡಿಎಂಎಗೆ ಬಿಟ್ಟದ್ದು ಎಂದು ನ್ಯಾಯಾಲಯ ಇದೇ ಸಂದರ್ಭದಲ್ಲಿ ತಿಳಿಸಿತು. ಅಲ್ಲದೆ ಮಾರ್ಗಸೂಚಿಗಳನ್ನು 6 ತಿಂಗಳೊಳಗೆ ಜಾರಿಗೆ ತರಬೇಕು ಎಂದು ಕೂಡ ಅದು ಸೂಚಿಸಿತು.ವಿಪತ್ತು ನಿರ್ವಹಣಾ ಕಾಯಿದೆಯ ಸೆಕ್ಷನ್ 12ರ ಅಡಿ ಕೃಪಾನುದಾನ ಒದಗಿಸುವುದು ಸೇರಿದಂತೆ