ಬೆಂಗಳೂರು: ವಿಧಾನಸೌಧದ ಮುಂಭಾಗ ನಡೆದ ಭವ್ಯ ಕಾರ್ಯಕ್ರಮದಲ್ಲಿ ರಾಜ್ಯದ 25 ನೇ ಮುಖ್ಯಮಂತ್ರಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಿದರು.ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬಿಳಿ ಪಂಚೆ, ಶರ್ಟ್ ಧರಿಸಿ ಕುಟುಂಬ ಸಮೇತರಾಗಿ ಬಂದಿದ್ದ ಕುಮಾರಸ್ವಾಮಿ ನಗು ನಗುತ್ತಲೇ ವೇದಿಕೆಯಲ್ಲಿದ್ದರು. ದೇವರು ಮತ್ತು ಕನ್ನಡ ನಾಡಿನ ಜನತೆ ಹೆಸರಿನಲ್ಲಿ ಕುಮಾರಸ್ವಾಮಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು.ಪ್ರಮಾಣ ವಚನ ಕಾರ್ಯಕ್ರಮ ಮುಗಿಯುತ್ತಿದ್ದಂತೆ ತಕ್ಷಣ ವೇದಿಕೆಯಿಂದ ಕೆಳಗಿಳಿದ