ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಪ್ರಾಥಮಿಕ ಹಂತದಲ್ಲೇ ಕಡಿವಾಣ ಹಾಕುವ ಸಲುವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಕೋವಿಡ್ ನೂತನ ಮಾರ್ಗಸೂಚಿಯನ್ನು ಹೊರಡಿಸಿದ್ದಾರೆ. ರಾಜ್ಯದಲ್ಲಿ ಫೆ.28 ರಿಂದ ಕೋವಿಡ್ ನಿರ್ಬಂಧಗಳನ್ನು ತೆಗೆದುಹಾಕಲಾಗಿತ್ತು. ಕೋವಿಡ್ ಕಡಿಮೆಯಾದ ಹಿನ್ನೆಲೆಯಲ್ಲಿ, ಸಾರ್ವಜನಿಕರ ದೈನಂದಿನ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಲಾಗಿತ್ತು.ಆದರೆ, ಪ್ರಸ್ತುತ ಕರ್ನಾಟಕ, ದೆಹಲಿ, ಹರಿಯಾಣ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಪ್ರತಿದಿನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ