ಹೊಸದಿಲ್ಲಿ : ದೇಶಾದ್ಯಂತ ಜನವರಿಯಿಂದ ಮಕ್ಕಳಿಗೂ ಕೊರೊನಾ ನಿರೋಧಕ ಲಸಿಕೆ ನೀಡಲು ಕೇಂದ್ರ ಸರಕಾರ ತೀರ್ಮಾನಿಸಿದೆ. ಮಕ್ಕಳಿಗೆ ಲಸಿಕೆ ನೀಡುವ ಕುರಿತು ಎರಡು ವಾರದೊಳಗೆ ಸರಕಾರದ ಉನ್ನತ ಸಲಹಾ ಸಮಿತಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಿದೆ. ಬಳಿಕ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಮಂಡಳಿ (ಎನ್ಟಿಎಜಿ) ದೇಶಾದ್ಯಂತ ಮಕ್ಕಳಿಗೆ ಲಸಿಕೆ ನೀಡುವ ಕುರಿತು ಯೋಜನೆ ರೂಪಿಸಲಿದೆ, ಎಂದು ಉನ್ನತ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ದೇಶದಲ್ಲಿ