ಬೆಂಗಳೂರು: ಆಪರೇಷನ್ ಕಮಲದ ಭೀತಿಯಿಂದ ಯಾರ ಕೈಗೂ ಸಿಗದಂತೆ ಕಾಂಗ್ರೆಸ್ ಶಾಸಕರು ರೆಸಾರ್ಟ್ ಸೇರಿಕೊಂಡಿದ್ದಾರೆ.ಬಿಜೆಪಿ ಕಾಂಗ್ರೆಸ್ ಶಾಸಕರನ್ನು ಸೆಳೆದು ಸರ್ಕಾರ ರಚಿಸಲು ಮುಂದಾಗಬಹುದು ಎಂಬ ಕಾರಣಕ್ಕೆ ಕಾಂಗ್ರೆಸ್ ನ ಎಲ್ಲಾ ಶಾಸಕರನ್ನು ನಿನ್ನೆ ಕೆಪಿಸಿಸಿ ಕಚೇರಿಯಿಂದ ನೇರವಾಗಿ ಬಿಡದಿ ಬಳಿಯ ಈಗಲ್ಟನ್ ರೆಸಾರ್ಟ್ ಗೆ ಕರೆದೊಯ್ಯಲಾಯಿತು.ಬಸ್ ಮೂಲಕ ಶಾಸಕರನ್ನು ರೆಸಾರ್ಟ್ ಗೆ ಬಿಗಿ ಭದ್ರತೆಯಲ್ಲಿ ಕರೆದೊಯ್ಯಲಾಯಿತು. ಇದೀಗ ಈಗಲ್ಟನ್ ರೆಸಾರ್ಟ್ ನಲ್ಲಿ ಕಾಲ ಕಳೆಯುತ್ತಿರುವ ಶಾಸಕರನ್ನು ಯಾರೂ ಸಂಪರ್ಕಿಸದಂತೆ ನೋಡಿಕೊಳ್ಳಲಾಗುತ್ತಿದೆ.