ಬೆಂಗಳೂರು : ಉತ್ತರದಲ್ಲಿ ಅಬ್ಬರಿಸ್ತಿರೋ ಮಳೆರಾಯ ದಕ್ಷಿಣದಲ್ಲಿ ಬರ್ಲೋ ಬೇಡ್ವೋ ಅಂತ ಸತಾಯಿಸ್ತಿದ್ದಾನೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿತ್ತು. ಜಿಟಿಜಿಟಿ ಮಳೆ ದಿನವಿಡೀ ಸುರಿಯಿತು. ರಾಜ್ಯದ ಕರಾವಳಿ-ದಕ್ಷಿಣ ಒಳನಾಡಿನಲ್ಲಿ ಜುಲೈ 16ರ ವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರದಲ್ಲಿ ಇಂದು ಕೂಡ ಮಳೆ ಮುಂದುವರಿದಿದೆ. ಮತ್ತಷ್ಟು ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ,