ಚೆನ್ನೈ, ಸೆ 10 : ಹಿಂದಿಯನ್ನು ಅಧಿಕೃತ ಸಂವಹನ ಭಾಷೆಯಾಗಿ ಕೇಂದ್ರವು ತಮಿಳುನಾಡಿನೊಂದಿಗೆ ಬಳಸಲಾಗದು ಎಂದು ಮದ್ರಾಸ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಹಿಂದಿಯನ್ನು ಅಧಿಕೃತ ಭಾಷೆಯಾಗಿ ಅಳವಡಿಸಿಕೊಳ್ಳದಿರುವ ರಾಜ್ಯಗಳೊಂದಿಗೆ ಇಂಗ್ಲಿಷ್ನಲ್ಲಿ ಸಂವಹನ ನಡೆಸುವ ಹೊಣೆಗಾರಿಕೆ ಕೇಂದ್ರ ಸರ್ಕಾರದ ಮೇಲಿದೆ ಎಂದು ಮದ್ರಾಸ್ ಹೈಕೋರ್ಟ್ ಇತ್ತೀಚೆಗೆ ಹೇಳಿದೆ. ಮಧುರೈ ಲೋಕಸಭಾ ಕ್ಷೇತ್ರದ ಸಂಸದ ಸು ವೆಂಕಟೇಸನ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯವು ಹೀಗೆ ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿಗಳಾದ ಎನ್