ಬೆಂಗಳೂರು : ಕರ್ನಾಟಕದಲ್ಲಿ ಚಳಿಗಾಲ ಶುರುವಾದರೂ ಮಳೆಗಾಲ ಮಾತ್ರ ಮುಗಿದಿಲ್ಲ. ಅಕಾಲದಲ್ಲಿ ಸುರಿಯುತ್ತಿರುವ ಮಳೆಯಿಂದ ರೈತರು ಕಂಗಾಲಾಗಿದ್ದಾರೆ. ವಿಪರೀತ ಮಳೆಯ ಆರ್ಭಟದಿಂದ ತರಕಾರಿಗಳ ಬೆಲೆಯೂ ಹೆಚ್ಚಾಗಿದೆ. ರಾಜ್ಯಾದ್ಯಂತ ನವೆಂಬರ್ 28ರವರೆಗೂ ಭಾರೀ ಮಳೆ ಸುರಿಯುವ ನಿರೀಕ್ಷೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರ್ಗಿ, ಹಾವೇರಿಯಲ್ಲಿ ಮಳೆ ಹೆಚ್ಚಾಗಲಿದೆ. ಇಂದಿನಿಂದ 4 ದಿನಗಳ ಕಾಲ ಕರ್ನಾಟಕ, ಕೇರಳ, ಮಾಹೆ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್ನಲ್ಲಿ