ಬೆಂಗಳೂರು: ಇಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ವಿಧಾನಸೌಧದ ಎದುರು ನಡೆಯಲಿರುವ ಸಮಾರಂಭದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಜೆಡಿಎಸ್ ಎಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ಈ ಸಮಾರಂಭಕ್ಕೆ ದೇಶದಎಲ್ಲಾ ಬಿಜೆಪಿ ವಿರೋಧಿ ಪಕ್ಷಗಳ ನಾಯಕರೆಲ್ಲರೂ ಆಗಮಿಸುವ ನಿರೀಕ್ಷೆಯಿದೆ. ಈ ಅದ್ಧೂರಿ ಸಮಾರಂಭಕ್ಕೆ ರಾಜ್ಯ ಬಿಜೆಪಿ ನಾಯಕರು ಆಗಮಿಸುತ್ತಾರಾ?ಮೂಲಗಳ ಪ್ರಕಾರ ಇಂದಿನ ಸಮಾರಂಭಕ್ಕೆ ಬಿಜೆಪಿ ನಾಯಕರು ಬರೋದಿಲ್ಲ. ಬಿಜೆಪಿ ನಾಯಕರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸದಂತೆ ಹೈಕಮಾಂಡ್ ನಿಂದ ಸೂಚನೆ ಬಂದಿದೆ