ಉಡುಪಿ: ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ಅವರಿಗೆ ಅವಕಾಶ ಮಾಡಿಕೊಡುವುದಕ್ಕಾಗಿ ಮಂತ್ರಿ ಸ್ಥಾನವನ್ನೇ ತ್ಯಾಗ ಮಾಡಿದ ವಿನಯ್ ಕುಮಾರ್ ಸೊರಕೆಯವರನ್ನು ಈ ಬಾರಿ ಭಾರಿ ಅಂತರದಿಂದ ಗೆಲ್ಲಿಸಿ ಮತ್ತೊಮ್ಮೆ ವಿಧಾನ ಸೌಧದ ಪಡಸಾಲೆಗೆ ಕಳುಹಿಸಿಬೇಕು ಎಂದು ರಾಜ್ಯ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.