ರಾಯಚೂರು : ಜಿಲ್ಲೆಯ ಮಾನ್ವಿ ತಾಲೂಕಿನ ಕೋಳಿ ಕ್ಯಾಂಪ್ನ 5 ವರ್ಷದ ಮಗುವಿನಲ್ಲಿ ಝಿಕಾ ವೈರಸ್ ಪತ್ತೆಯಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.ವೈರಸ್ ಪತ್ತೆಯಾದ ಬೆನ್ನಲ್ಲೇ ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದೆ. ಗ್ರಾಮದ ವಾತಾವರಣ ಬಗ್ಗೆ ಅಧ್ಯಯನವನ್ನೂ ನಡೆಸಿದೆ. 5 ವರ್ಷದ ಮಗುವಿಗೆ ಜ್ವರ ಹೆಚ್ಚಾಗಿದ್ದರಿಂದ ರಾಯಚೂರಿನಿಂದ ಬಳ್ಳಾರಿಯ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡೆಂಗ್ಯೂ, ಚಿಕನ್ ಗುನ್ಯಾ ಲಕ್ಷಣಗಳು ಇತ್ತೆಂದು ಮಾದರಿಯನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆದ್ರೆ