ಮುಂಬೈ : ಕೊರೋನಾ ತಣ್ಣಗಾಯ್ತು ಅಂತ ನಿಟ್ಟುಸಿರು ಬಿಟ್ಟಿದ್ದ ಮಹಾರಾಷ್ಟ್ರದಲ್ಲಿ ಝಿಕಾ ವೈರಸ್ ಭೀತಿ ಶುರುವಾಗಿದೆ.ಪಾಲ್ಗರ್ ಜಿಲ್ಲೆಯಲ್ಲಿ 7 ವರ್ಷದ ಬಾಲಕಿಗೆ ಝಿಕಾ ವೈರಸ್ ತಗುಲಿದೆ. ಜ್ವರದಿಂದ ಬಳಲುತ್ತಿದ್ದ ಬಾಲಕಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ.2021ರ ಜುಲೈನಲ್ಲಿ ಝಿಕಾ ವೈರಸ್ ಮೊದಲ ಪ್ರಕರಣ ಪುಣೆಯಲ್ಲಿ ಪತ್ತೆಯಾಗಿತ್ತು. ಈ ಪ್ರಕರಣದಿಂದ ಮತ್ತಷ್ಟು ಆತಂಕ ಹೆಚ್ಚಿದೆ. ಒಟ್ಟಿನಲ್ಲಿ ಪ್ರಕರಣ ಪತ್ತೆಯಾದ ಬೆನ್ನಲ್ಲೇ ಸೂಕ್ತ ಚಿಕಿತ್ಸೆ ಹಾಗೂ ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅಲ್ಲಿನ