ಸಂಸತ್ತಿನ ಬಜೆಟ್ ಅಧಿವೇಶನ ಇಂದು ಆರಂಭ

ನವದೆಹಲಿ| pavithra| Last Modified ಶುಕ್ರವಾರ, 31 ಜನವರಿ 2020 (11:23 IST)
ನವದೆಹಲಿ : ಸಂಸತ್ತಿನ ಬಜೆಟ್ ಅಧಿವೇಶನ ಇಂದು ಆರಂಭವಾಗಲಿದ್ದು, ನಾಳೆ ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಸಕ್ತ ವರ್ಷದ ಬಜೆಟ್ ಮಂಡಿಸಲಿದ್ದಾರೆ.


ಇದೀಗ ಸಂಸತ್ ನ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಂಸತ್ ನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾಡಿದ್ದಾರೆ. ಬಳಿಕ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್  2019-20ನೇ ಸಾಲಿನ ಆರ್ಥಿಕ ಸಮೀಕ್ಷೆಯನ್ನು ಸದನದಲ್ಲಿ ಮಂಡಿಸಲಿದ್ದಾರೆ.


ಇಂದು ಆರಂಭಗೊಂಡ ಸಂಸತ್ತಿನ ಅಧಿವೇಶನ ಮೊದಲ  ಹಂತ ಫೆಬ್ರವರಿ 11ರಂದು ಮುಕ್ತಾಯವಾಗಲಿದ್ದು, ಎರಡನೇ ಹಂತ ಮಾರ್ಚ್ 2ರಿಂದ ಏಪ್ರಿಲ್ 3ರವರೆಗೆ ನಡೆಯಲಿದೆ ಎನ್ನಲಾಗಿದೆ.

ಇದರಲ್ಲಿ ಇನ್ನಷ್ಟು ಓದಿ :